ಮುಂದಿನ ಮೂರು ಮುಕ್ಕಾಲು ವರ್ಷ ‘ಸಿದ್ಧರಾಮಯ್ಯ’ ಅವರೇ ಮುಖ್ಯಮಂತ್ರಿ: ಸಚಿವ ಈಶ್ವರ್ ಖಂಡ್ರೆ

Spread the love

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಇಲಾಖೆಯ ಎಲ್ಲ ಕಾರ್ಯಕ್ರಮದಲ್ಲೂ ಭಾಗಿಯಾಗಿ ಮಾರ್ಗದರ್ಶನ ಮಾಡುತ್ತಾರೆ. ಅವರು ಗಟ್ಟಿ ನಿರ್ಧಾರ ಕೈಗೊಂಡು, ಗಟ್ಟಿಯಾಗಿ ಸರ್ಕಾರ ನಡೆಸುತ್ತಿದ್ದಾರೆ. ಮುಂದಿನ ಮೂರೂ ಮುಕ್ಕಾಲು ವರ್ಷವೂ ಅವರೇ ಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಮಾಡುತ್ತಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿಂದು ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿದ ತರುವಾಯ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟ ನುಡಿಗಳಲ್ಲಿ ತಿಳಿಸಿದರು.