ಇನ್ನೆರಡು ದಿನಗಳಲ್ಲಿ `ಮುಖ್ಯಮಂತ್ರಿ’ ಸ್ಥಾನಕ್ಕೆ ರಾಜೀನಾಮೆ : ದೆಹಲಿ ಸಿಎಂ ಕೇಜ್ರಿವಾಲ್ ಮಹತ್ವದ ಘೋಷಣೆ

Spread the love

ನವದೆಹಲಿ : ಮುಖ್ಯಮಂತ್ರಿ ಸ್ಥಾನಕ್ಕೆ ಎರಡು ದಿನಗಳಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಎರಡು ದಿನಗಳ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಎರಡು ದಿನಗಳ ನಂತರ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ, ಜನರು ತೀರ್ಪು ನೀಡುವವರೆಗೆ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ. ನಾನು ಪ್ರತಿ ಮನೆ, ಬೀದಿಗೆ ಹೋಗುತ್ತೇನೆ ಮತ್ತು ಕುಳಿತುಕೊಳ್ಳುವುದಿಲ್ಲ. ನಾನು ಜನರಿಂದ ತೀರ್ಪು ಬರುವವರೆಗೂ ಸಿಎಂ ಕುರ್ಚಿ ಮೇಲೆ ಕೂರುವುದಿಲ್ಲ ಎಂದು ಹೇಳಿದ್ದಾರೆ.