ಹುಬ್ಬಳ್ಳಿ : ‘ಹಿಂದೂ’ ಸ್ಮಶಾನದ ಕಂಪೌಂಡ್ ಒಡೆದು ‘ಇಂದಿರಾ ಕ್ಯಾಂಟೀನ್’ ನಿರ್ಮಾಣ : ಪ್ರಮೋದ್ ಮುತಾಲಿಕ್ ಕಿಡಿ

Spread the love

ಹುಬ್ಬಳ್ಳಿ : ಒಂದು ಕಡೆ ರಾಜ್ಯದಲ್ಲಿ ನಾಗಮಂಗಲ ಗಲಭೆ ಭಾರಿ ಸದ್ದು ಮಾಡುತ್ತಿದ್ದು, ಇನ್ನೊಂದೆಡೆ ಹುಬ್ಬಳ್ಳಿಯಲ್ಲಿ ಹಿಂದೂ ಸ್ಮಶಾನದ ಕಂಪೌಂಡ್ ಒಡೆದು ಹಾಕಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಿದ್ದಾರೆ ಎಂದು ಶ್ರೀ ರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂ ಸ್ಮಶಾನ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿರುವ ಹಿಂದೂ ಸ್ಮಶಾನದ ಕಾಂಪೌಂಡ್ ಒಡೆದು ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಪ್ರಸಾದ್ ಅಭಯ ವಿರುದ್ಧ ಇಂದಿರಾ ಕ್ಯಾಂಟೀನ್ ನಿರ್ಮಾಣದ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಇದೆ ಎಂದು ಶಾಸಕ ಅಬ್ಬಯ್ಯ ದರ್ಪ ತೋರಿದ್ದಾರೆ. ಎರಡೇ ದಿನದಲ್ಲಿ ರಾತ್ರೋರಾತ್ರಿ ಇಂದಿರಾ ಕ್ಯಾಂಟೀನ್ ಕಟ್ಟಿದ್ದಾರೆ.ಕೂಡಲೇ ಕ್ಯಾಂಟೀನ್ ಕಟ್ಟಡ ಸ್ಥಳಾಂತರ ಮಾಡುವಂತೆ ಆಗ್ರಹಿಸುತ್ತಿದ್ದು, ಇಲ್ಲದಿದ್ದರೆ ನಾವೇ ಇಂದಿರಾ ಕ್ಯಾಂಟೀನ್ ತೆರವು ಮಾಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹ ಮಾಡಿದರು.