ಸಿದ್ದರಾಮಯ್ಯರೇ ಮುಖ್ಯಮಂತ್ರಿ ಆಗಿರ್ತಾರೆ : ಸತೀಶ್ ಜಾರಿಕಿಹೊಳಿ ಮಹತ್ವದ ಹೇಳಿಕೆ

Spread the love

ಮೈಸೂರು : ಸಿದ್ದರಾಮಯ್ಯ ಅವರೆ ಮುಖ್ಯಮಂತ್ರಿ ಆಗಿ ಇರುತ್ತಾರೆ. ಅದರು 5 ವರ್ಷವೋ ಅಥವಾ 3 ವರ್ಷವೋ ಗೊತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಇರ್ತಾರೆ. 5 ವರ್ಷವೋ ಅಥವಾ 3 ವರ್ಷವೋ ಗೊತ್ತಿಲ್ಲ. ಹೈಕಮಾಂಡ್ ಗೆ ಕೇಳಿ. ಆದರೆ ಸಿದ್ದರಾಮಯ್ಯ ಅವರೆ ನಮ್ಮ ಮುಖ್ಯಮಂತ್ರಿ ಎಂದರು.

ನಾನು ಸಿಎಂ ಸಿದ್ದರಾಮಯ್ಯನವರ ಜೊತೆಗೆ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ, ಅದರ ಬಗ್ಗೆ ಚರ್ಚೆಯೂ ನಡೆದಿಲ್ಲ ಎಂದು ಹೇಳಿದ್ದಾರೆ.