ರತನ್ ಟಾಟಾ ನಿಧನ; ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ – ಏಕನಾಥ್ ಶಿಂಧೆ

Spread the love

ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರ ಅಂತ್ಯಕ್ರಿಯೆಯನ್ನು (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.

ಅನಾರೋಗ್ಯ ಹಿನ್ನೆಲೆ ಮುಂಬೈನ ಬ್ರೀಚ್ ಕಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಅನೇಕ ಗಣ್ಯರು, ರಾಜಕಾರಣಿಗಳು ರತನ್ ಟಾಟಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.