ನಾವು ಎಲ್ಲಿಯೂ, ಯಾವತ್ತೂ ಸಿಎಂ ಪದವಿ ಬಗ್ಗೆ ಚರ್ಚೆ ಮಾಡಿಲ್ಲ: ಸಚಿವ ಪರಮೇಶ್ವರ್‌

Spread the love

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ಅವರಿಂದು ಸದಾಶಿವನಗರದ ನಿವಾಸದಲ್ಲಿ ಗೃಹ ಸಚಿವ ಪರಮೇಶ್ವರ್‌ ಅವರನ್ನ ಭೇಟಿ ಮಾಡಿದ್ದಾರೆ. ಹೆಚ್‌ಡಿಕೆ ಹಾಗೂ ಯಡಿಯೂರಪ್ಪ ವಿರುದ್ಧ ಗಂಗೇನಹಳ್ಳಿ ಡಿನೋಟಿಫಿಕೇಷನ್‌ ಪ್ರಕರಣ, ಮುಡಾ ಪ್ರಕರಣ ಸೇರಿ ಕೆಲವು ಮಹತ್ವದ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರತ್ಯೇಕ ಸಭೆಗಳಿಗೆ ಹೈಕಮಾಂಡ್ ಬ್ರೇಕ್ ಹಾಕಲು ತಾಕೀತು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾನಾಗಲೀ ಸತೀಶ್ ಜಾರಕಿಹೊಳಿ ಆಗಲೀ, ಮಹಾದೇವಪ್ಪ ಆಗಲೀ ನಾವು ಸಿಎಂ ಪದವಿ ಬಗ್ಗೆ ಚರ್ಚೆ ಯಾವತ್ತೂ ಮಾಡಿಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರ್ತಾರೆ ಅಂತ ನಾವು ಅನೇಕ ಬಾರಿ ಹೇಳಿದ್ದೀವಿ. ಇದು ಬಿಟ್ಟು ನಾವ್ಯಾರೂ ಕೂಡಾ ಸಿಎಂ ಅವರನ್ನ ಬದಲಾಯಿಸಿ, ಬೇರೆಯವರನ್ನು ಮಾಡಿ, ನಮಗೆ ಮಾಡಿ ಅಂತ ಮಾತಾಡಿಲ್ಲ. ಇನ್ಮುಂದೆ ನಾನು ಸಿಎಂ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.