ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ `DCM ಡಿಕೆಶಿ’ಗೆ ಬಿಗ್ ಶಾಕ್ : `CBI’ ನಿಂದ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ | 

Spread the love

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ಶಾಕ್, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ. ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು. ಸಿಬಿಐ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ‘ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಶಿವಕುಮಾರ್ ಅವರ ಅಕ್ರಮ ಆಸ್ತಿಗಳ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಳ್ಳುವ ಕಾಂಗ್ರೆಸ್ ಸರ್ಕಾರದ 2023ರ ನವೆಂಬರ್ 28ರ ನಿರ್ಧಾರ ಮತ್ತು 2023ರ ಡಿಸೆಂಬರ್ 26ರಂದು ಕರ್ನಾಟಕ ಲೋಕಾಯುಕ್ತಕ್ಕೆ ತನಿಖೆಗೆ ಒಪ್ಪಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಿಬಿಐ ಇದೀಗ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನಾಯಾಯಮೂರ್ತಿ ಸೂರ್ಯಕಾಂತ್ ಹಾಗೂ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠವು, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.