ಬೆಲೆಕೇರಿ ಅದಿರು ನಾಪತ್ತೆ ಕೇಸ್ : 3 ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಗೆ ಒಟ್ಟು 15 ವರ್ಷ ಶಿಕ್ಷೆ ಪ್ರಕಟಿಸಿದ ಕೋರ್ಟ್..!

Spread the love

ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ತೀರ್ಪು ಪ್ರಕಟವಾಗಲಿದ್ದು ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ ಸಂತೋಷ ಗಜಾನನ ಭಟ್ ಅವರು, ಮೂರು ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಗೆ ಒಟ್ಟು 15 ವರ್ಷ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದ್ದಾರೆ.ಅಲ್ಲದೆ ಒಟ್ಟು 9 ಕೋಟಿ 60 ಲಕ್ಷ ದಂಡ ವಿಧಿಸಬೇಕು ಎಂದು ಕೋಟ್ ಆದೇಶಿಸಿದೆ.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಈ ಕುರಿತು ತೀರು ಪ್ರಕಟಿಸಿರುವ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಕಳ್ಳತನ ಪ್ರಕರಣದಲ್ಲಿ ಅಪರಾಧೀಗಳಿಗೆ 5 ವರ್ಷ ಅಲ್ಲದೆ ವಂಚನೆ ಪ್ರಕರಣದಲ್ಲಿ 7 ವರ್ಷ ಹಾಗೂ ಒಳಸಂಚು ಆರೋಪದಲ್ಲಿ 5 ವರ್ಷ ಶಿಕ್ಷೆ ಪ್ರಕಟಿಸಲಾಗಿದೆ.ಹಾಗಾಗಿ ಸತೀಶ್ ಸೈಲ್ ಅವರಿಗೆ ಜೈಲೇ ಗತಿ ಎನ್ನುವಂತಾಗಿದೆ.

ಕಳೆದ 2010 ರ ಜೂನ್ 2ರಲ್ಲಿ, ಅಂದರೆ ಕೇವಲ 80 ದಿನಗಳಲ್ಲಿ 6 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ನಾಪತ್ತೆಯಾಗಿತ್ತು. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ ತನಿಖೆ ಆರಂಭಿಸಿತ್ತು. ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಕಾರಾಪುಡಿ ಮಹೇಶ್, ಸ್ವಸ್ತಿಕ್ ನಾಗರಾಜು ಸೇರಿದಂತೆ ಹಲವರ ವಿರುದ್ಧ ಆರೋಪಪಟ್ಟಿ ದಾಖಲಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಿಕ್ಷೆ ಪ್ರಕಟಿಸಲಾಗಿದೆ

ಏನಿದು ಪ್ರಕರಣ?

ಬೇಲೆಕೇರಿ ಎಂಬುದು ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನಲ್ಲಿರುವ ಬಂದರು. ಇಲ್ಲಿಂದ ನಿಯಮ ಬಾಹಿರವಾಗಿ ವಿದೇಶಕ್ಕೆ ಅದಿರು ರಫ್ತು ಮಾಡಲಾಗಿತ್ತು. 2009ರ ಜನವರಿ 1ರಿಂದ 2010ರ ಮೇ 31ರವರೆಗೆ, ಅಂದರೆ 17 ತಿಂಗಳ ಅವಧಿಯಲ್ಲಿ ಬರೋಬ್ಬರಿ 88 ಲಕ್ಷದ 6 ಸಾವಿರ ಮೆಟ್ರಿಕ್ ಟನ್ ಅದಿರು ರಫ್ತಾಗಿತ್ತು. ಇಲ್ಲಿ ಗಮನಿಸಬೇಕಾದ ವಿಷಯವೆಂದರೆ, 38 ಲಕ್ಷ ಮೆಟ್ರಿಕ್ ಟನ್ ಅದಿರು ರಫ್ತು ಮಾಡುವುದಕ್ಕಷ್ಟೇ ಅನುಮತಿ ನೀಡಲಾಗಿತ್ತು.

ಗಣಿ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿದ್ದ ಆರೋಪಿಗಳು ಅದಿರು ರಫ್ತು ಮಾಡಿದ್ದರು. ಬರೋಬ್ಬರಿ 50 ಲಕ್ಷ ಮೆಟ್ರಿಕ್​ ಟನ್​ ಅದಿರು ಹೆಚ್ಚುವರಿಯಾಗಿ ವಿದೇಶಕ್ಕೆ ರಫ್ತಾಗಿತ್ತು. 73 ರಫ್ತುದಾರರು ಈ ರಫ್ತು ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು. ಈ ಪೈಕಿ ನಾಲ್ಕು ಕಂಪನಿಗಳ ಮೂಲಕ 33 ಲಕ್ಷ ಮೆಟ್ರಿಕ್​ ಟನ್​ ಅದಿರು ಕಳುಹಿಸಲಾಗಿತ್ತು. ಹೀಗೆ ರಫ್ತು ಮಾಡಿದ್ದ 4 ಕಂಪನಿಗಳಲ್ಲಿ ಶಾಸಕ ಸತೀಶ್​ ಸೈಲ್​ ಒಡೆತನದ ಕಂಪನಿ ಕೂಡ ಇದೆ.

ಸೈಲ್ ಒಡೆತನದ ಶ್ರೀಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ 7 ಲಕ್ಷದ 23ಸಾವಿರ ಮೆಟ್ರಿಕ್ ಟನ್​ ಅದಿರು ಸಾಗಿಸಿತ್ತು. ಇನ್ನುಳಿದ ಕಂಪನಿಗಳ ಅದಿರು ರಫ್ತುವಿನಲ್ಲಿ ಸೈಲ್​ ಪರೋಕ್ಷ ಭಾಗಿಯಾಗಿದ್ದರು.ಗಣಿ ಇಲಾಖೆ 38 ಲಕ್ಷ ಮೆಟ್ರಿಕ್​ ಟನ್​ ಅದಿರು ರಫ್ತಿಗೆ ಮಾತ್ರ ಅನುಮತಿ ಕೊಟ್ಟಿತ್ತು. ಆದರೆ ವಿದೇಶಕ್ಕೆ ಹೋಗಿದ್ದು ಮಾತ್ರ 88 ಲಕ್ಷ ಮೆಟ್ರಿಕ್ ಟನ್ ಎಂದು ಹೇಳಲಾಗುತ್ತಿದೆ.