ಬೆಂಗಳೂರು : ಕರ್ನಾಟಕದಲ್ಲಿ ಇದೀಗ ವಕ್ಫ್ ಆಸ್ತಿ ವಿವಾದ ಭುಗಿಲೆದ್ದಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಬಿದ್ದಿದೆ.
ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್ ಪಡೆರಿಯಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದ್ದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಕೆಲಸ ದಿನಗಳ ಹಿಂದೇ ಸೂಚನೆ ನೀಡಿದ್ದರು. ಇದೀಗ ಅಧಿಕೃವಾಗಿ ಆದೇಶ ಹೊರಬಿದ್ದಿದೆ.
ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಕೊನೆಗೆ ಮಠ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವವರೆಗೆ ಬಂದಿತ್ತು. ಬಳಿಕ ರಾಜ್ಯದಲ್ಲಿ ರೈತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸದ್ಯ ಎಚ್ಚೆತ್ತುಕೊಂಡಿರುವ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್ನ್ನು ಅಧಿಕೃತವಾಗಿ ವಾಪಾಸ್ ಪಡೆದುಕೊಂಡಿದೆ.