ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗೆಪಾಟಲಿಗೀಡಾದ ಘಟನೆ ನಡೆದಿದೆ. ಹೌದು ಆನ್ಲೈನ್ ಸಂವಾದ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಬರಲ್ಲ ಎಂದು ಹೇಳಿದ್ದಾನೆ. ಇದನ್ನು ಕೇಳಿಸಿಕೊಂಡ ಶಿಕ್ಷಣ ಸಚಿವ ಹೇ ಯಾರೋ ಅದು ಹಾಗೆ ಹೇಳಿದ್ದು ಎಂದು ಆಕ್ರೋಶಗೊಂಡಿದ್ದಾರೆ.
ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ, ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಸರಿಯಾಗಿ ಬರಲ್ಲ ಎಂದು ಮಾತನಾಡಿದ್ದಾನೆ. ಇದನ್ನು ಕೇಳಿಸಿಕೊಂಡ ಸಚಿವ ಮಧು ಬಂಗಾರಪ್ಪ ಗರಂ ಆಗಿದ್ದು, ಯಾರೋ ಅದು ಹಾಗೆ ಹೇಳಿದ್ದು ಎಂದು ಆಕ್ರೋಶಗೊಂಡಿದ್ದಾರೆ.
ನಾನು ಕನ್ನಡನಾ ಅಥವಾ ಉರ್ದು ಮಾತನಾಡುತ್ತಿದ್ದೆನಾ? ವಿದ್ಯಾರ್ಥಿಗೆ ಹಾಗೆ ಯಾರು ಹೇಳಿದ್ದು ಮಾಹಿತಿ ತೆಗೆದುಕೊಳ್ಳಿ. ಆತನಿಗೆ ಸುಮ್ಮನೆ ಬಿಡಬೇಡಿ, ಏನು ಅಂತ ಕೇಳಿ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಗೆ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದ್ದಾರೆ.ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂವಾದದಲ್ಲಿ ಅಭಿಪ್ರಾಯ ಸಂಗ್ರಹ ವೇಳೆ ವಿದ್ಯಾರ್ಥಿ ಒಬ್ಬ ಈ ಹೇಳಿಕೆ ನೀಡಿದ್ದ ಎನ್ನಲಾಗಿದೆ.