ಮುಂಡಗೋಡ : ಇಲ್ಲಿಯ ಶಿರಸಿ ರಸ್ತೆಯಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆಯ 50 ವಿದ್ಯಾರ್ಥಿಗಳಿಗೆ ಮಂಗನ ಬಾವು ಕಾಯಿಲೆ ಕಾಣಿಸಿಕೊಂಡಿದೆ.
ವಸತಿ ಶಾಲೆಯಲ್ಲಿ 205 ವಿದ್ಯಾರ್ಥಿಗಳಿದ್ದು, ಅದರಲ್ಲಿ ಬುಧವಾರ 25 ಮಂದಿಗೆ ಮಂಗನಬಾವು ಕಾಣಿಸಿದ್ದರಿಂದ ಮನೆಗೆ ಕಳಿಸಲಾಗಿತ್ತು. ಗುರುವಾರ ಮತ್ತೆ 25 ವಿದ್ಯಾರ್ಥಿಗಳಲ್ಲಿ ಕಾಯಿಲೆಯ ಲಕ್ಷಣ ಕಂಡುಬಂದಿದೆ.
”ಮಂಗನ ಬಾವು ಬಂದಿರುವ ವಿದ್ಯಾರ್ಥಿಗಳು ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿರುವುದು ಕಂಡುಬಂತು. 3-4 ದಿನಗಳ ಹಿಂದೆ ಕಾಣಿಸಿಕೊಂಡ ಮಂಗನ ಬಾವು ದಿನದಿಂದ ದಿನಕ್ಕೆ ತೀವ್ರವಾಗಿ ಹರಡುತ್ತಿದೆ” ಎಂದು ಶಿಕ್ಷಕರು ತಿಳಿಸಿದ್ದಾರೆ.
ಇಂದಿರಾಗಾಂಧಿ ವಸತಿ ಶಾಲೆಗೆ ತಾಲೂಕಾ ಆರೋಗ್ಯಾಧಿಕಾರಿ ಡಾ.ಭರತ ಹಾಗೂ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ.ದಾಸನಕೊಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.