ನ.28ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನವೆಂಬರ್.28ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿಗದಿಯಾಗಿದೆ.

ದಿನಾಂಕ 28-11-2024ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 24ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.

ನವೆಂಬರ್.28ರ ಗುರುವಾರ ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಅನುದಾನ, ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆಯನ್ನು ನೀಡುವ ಸಾಧ್ಯತೆ ಇದೆ.