ಮುಂಡಗೋಡ : ಲೊಯೋಲಾ ವಿಕಾಸ ಕೇಂದ್ರ ಮತ್ತು ಯುವ ರತ್ನ ಯುವ ಒಕ್ಕೂಟ, ಸಮಾನ ಮನಸ್ಕರ ಸಂಘಟನೆಗಳು ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ನಾಳೆ ದಿ.26ರಂದು ಸಂವಿಧಾನ ದಿನಾಚರಣೆ ವಜ್ರ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.
ನಾಳೆ ದಿ.26ರಂದು ಬೆಳಿಗ್ಗೆ 10ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿ ಜಾಥಾ ಕಾರ್ಯಕ್ರಮ ನಡೆಯಲಿದ್ದು, ಭೋವಿ ಸಮುದಾಯದ ಜಿಲ್ಲಾಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ ಜಾಥಾವನ್ನು ಉದ್ಘಾಟಿಸಲಿದ್ದಾರೆ.
ಬೆಳಿಗ್ಗೆ 11ಗಂಟೆಗೆ ಲೊಯೋಲಾ ವಿಕಾಸ ಕೇಂದ್ರದ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ತಹಶೀಲದಾರ ಶಂಕರ ಗೌಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಲೊಯೋಲಾ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಫಾದರ್ ಮೆಲ್ವಿನ್ ಲೊಬೊ ಅಧ್ಯಕ್ಷತೆ ವಹಿಸಲಿದ್ದಾರೆ.