ಹೆಸ್ಕಾಂ ಅಧ್ಯಕ್ಷರಾಗಿ ಅಜ್ಜಂಪೀರ ಖಾದ್ರಿ ನೇಮಕ

Spread the love

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ
ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್‌ ಖಾನ್ ಪಠಾಣ ಗೆಲುವು ಸಾಧಿಸಲು ಪ್ರಮುಖ ಪಾತ್ರ ವಹಿಸಿದ್ದ ಸೈಯದ್ ಅಜ್ಜಂಪೀರ ಖಾದ್ರಿ ಅವರನ್ನು, ಹೆಸ್ಕಾಂ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದರೆ, ಖಾದ್ರಿ ಅವರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರೆ ಮುಖಂಡರು ಭರವಸೆ ನೀಡಿದ್ದರು.
‘ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತದ (ಹೆಸ್ಕಾಂ) ಅಧ್ಯಕ್ಷರನ್ನಾಗಿ ಅಜ್ಜಂಪೀರ್ ಖಾದ್ರಿ ಅವರನ್ನು ನೇಮಿಸಲಾಗಿದೆ. ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರ ಬದಲಿಗೆ, ಅವರ ಸ್ಥಾನಕ್ಕೆ ಖಾದ್ರಿ ಅವರನ್ನು ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.