ಬೆಂಗಳೂರು : ನಾಳೆ ರೋಮ್ ನಗರದ ವ್ಯಾಟಿಕನ್ ಸಿಟಿಯಲ್ಲಿ ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಈ ಒಂದು ಕಾರ್ಯಕ್ರಮದಲ್ಲಿ ಕರ್ನಾಟಕದ ವಿಧಾನಸಭೆಯ ಸ್ಪೀಕರ್ ಆಗಿರುವಂತಹ ಯುಟಿ ಖಾದರ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗಿಯಾಗಿ ಭಾಷಣ ಮಾಡಲಿದ್ದಾರೆ.
ನವೆಂಬರ್ 30ರಂದು ಅಂದರೆ ನಾಳೆ ಅಂತರಾಷ್ಟ್ರೀಯ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು ರೋಮ್ ನ ವ್ಯಾಟಿಕನ್ ಸಿಟಿಯಲ್ಲಿ ಈ ಒಂದು ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮ ನಡೆಯಲಿದೆ. ಸರ್ವಧರ್ಮ ಸಮ್ಮೇಳನದ ಅತಿಥಿಯಾಗಿ ಸ್ಪೀಕರ್ ಯು ಟಿ ಖಾದರ್ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಯು ಟಿ ಖಾದರ್ ಭಾಷಣ ಮಾಡಲಿದ್ದಾರೆ. ಮಾನವೀಯತೆಗಾಗಿ ಧರ್ಮಗಳ ಬಗ್ಗಟ್ಟು ಎಂಬ ವಿಷಯದಲ್ಲಿ ಭಾಷಣ ಮಾಡಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಲಿದ್ದಾರೆ ಈ ವೇಳೆ ಖಾದರ್ ಅವರು ಕ್ರೈಸ್ತ ಧರ್ಮ ಗುರುಗಳಾದಂತಹ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಲಿದ್ದಾರೆ.