ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿದ್ದು, ಇಂದು ಮಾಜಿ ಶಾಸಕರು, ಬೆಳ್ಳಂ ಬೆಳಿಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪ ಮನೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ, ಮಾಜಿ ಶಾಸಕರುಗಳಾದಂತಹ ಎಂಪಿ ರೇಣುಕಾಚಾರ್ಯ, ಬಿಸಿ ಪಾಟೀಲ್ ಮಾಡಾಳ್ ವಿರೂಪಾಕ್ಷಪ್ಪ ಹಲವರು ಯಡಿಯೂರಪ್ಪ ಅವರೊಂದಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದರು. ಈ ಸಂದರ್ಭದಲ್ಲಿ ಯತ್ನಾಳ್ ಉಚ್ಚಾಟನೆಗೆ ಕಾರ್ಯಕರ್ತರ ಅಭಿಪ್ರಾಯ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಮಾಜಿ ಶಾಸಕರು ಈ ವಿಷಯವನ್ನು ಬಿಎಸ್ ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದಾರೆ.
ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಬೇಕು ಎಂಬ ಕೂಗು ಕೇಳಿ ಬಂದ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ ಅವರು, ಉಗ್ರ ಕ್ರಮ ಕೈಗೊಳ್ಳುವುದಕ್ಕೆ ನನ್ನದೇನು ತಕರಾರು ಇಲ್ಲ. ಬೇಕಾದುದ್ದನ್ನು ಮಾಡಲಿ ನಾನು ಅದನ್ನು ಸ್ವಾಗತ ಮಾಡುತ್ತೇನೆ. ನಾವು ಯಡಿಯೂರಪ್ಪನವರ ಭ್ರಷ್ಟಾಚಾರದ ಬಗ್ಗೆ ಮಾತನಾಡಿಲ್ಲ. ಯಡಿಯೂರಪ್ಪನವರ ಪೋಕ್ಸೋ ಬಗ್ಗೆ ಮಾತನಾಡಿಲ್ಲ. ನಮ್ಮ ವಕ್ಫ್ ಹೋರಾಟಕ್ಕೆ ದೆಹಲಿಯಿಂದ ತಡೆ ಹಿಡಿದಿಲ್ಲ. ಇದರ ಅರ್ಥ ನಮಗೆ ಅವರ ಆಶೀರ್ವಾದ ಇದೆ ಅಂತ ಅಂದುಕೊಳ್ಳುತ್ತೇವೆ ಯಾರ ಬಗ್ಗೆ ಮಾತನಾಡಬೇಡಿ ಎಂದು ನಮಗೆ ಹೇಳಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ತಿಳಿಸಿದರು.