ಪೊಲೀಸರೇ ಜೈಲಿಗೆ ಹೋಗ್ಬೇಕಾಗುತ್ತೆ – ಸ್ಫೀಕರ್‌ ವಾರ್ನಿಂಗ್‌ ಬೆನ್ನಲ್ಲೇ ಕೋರ್ಟ್ ಅಂಗಳಕ್ಕೆ ಹೋಗುತ್ತಾ ಸಂವಿಧಾನಿಕ ಸಂಘರ್ಷ?

Spread the love

ಬೆಂಗಳೂರು: ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪೊಲೀಸರಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಸಿಟಿ ರವಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಸಂವಿಧಾನಿಕ ಸಂಘರ್ಷ ಕೋರ್ಟ್ ಅಂಗಳಕ್ಕೆ ಹೋಗುತ್ತಾ ಎಂಬ ಪ್ರಶ್ನೆ ಎದ್ದಿದೆ. 

ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನದ ಒಳಗೆ ನಡೆಯುವ ವಿಚಾರಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ಮಹಜರು ನಡೆಸಲು ನಾನು ಅನುಮತಿ ನೀಡಿಲ್ಲ. ಯಾವುದೇ ಕಾರಣಕ್ಕೂ ಸದನದ ಒಳಗೆ ಬರಬಾರದು ಎಂದು ಎಚ್ಚರಿಕೆ ನೀಡಿದ್ದೇನೆ. ನನ್ನ ಆದೇಶವನ್ನು ಧಿಕ್ಕರಿಸಿದರೆ ಪೊಲೀಸರೇ ಜೈಲಿಗೆ ಹೋಗ್ಬೇಕಾಗುತ್ತೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.  

ಸಿ.ಟಿ.ರವಿ, ಹೆಬ್ಬಾಳ್ಕರ್ ಕೇಸ್ ಮುಗಿದ ಅಧ್ಯಾಯವಾಗಿದ್ದು 19 ರಂದೇ ಸದನದಲ್ಲಿ ರೂಲಿಂಗ್ ಕೊಟ್ಟಿದ್ದೇನೆ. ಅನಿರ್ದಿಷ್ಟಾವಧಿಗೆ ಸದನ ಮುಂದೂಡಿಕೆ ಆಗಿದೆ. ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ. ನಮ್ಮ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿಲ್ಲ. ಅದೆಲ್ಲ ಫೇಕ್ ವಿಡಿಯೋ ಇರಬೇಕು. ದಾಖಲೆ ಇದ್ದರೆ ದೂರು ಕೊಡಲಿ ಎಫ್‌ಎಸ್‌ಎಲ್‌ಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.