ಮುಂಡಗೋಡ : ದಿ.28ರಿಂದ ಮೂರು ದಿನಕ್ಕೊಮ್ಮೆ ಕುಡಿಯುವ ನೀರನ್ನು ಮುಂಡಗೋಡ ನಗರದಲ್ಲಿ ಸರಬರಾಜು ಮಾಡಲಾಗುವುದು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಚಂದ್ರಶೇಖರ್ ಹೇಳಿದ್ದಾರೆ.
ಮುಂಡಗೋಡ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರನ್ನು ಸನವಳ್ಳಿ ಜಲಾಶಯದಿಂದ ಸರಬರಾಜು ಮಾಡುತ್ತಿದ್ದು, ಈ ಜಲಾಶಯದ ಶುದ್ಧೀಕರಣ ಘಟಕದಲ್ಲಿ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ಪೂರ್ಣಗೊಳ್ಳುವವರೆಗೆ ದಿ.28ರಿಂದ ಸಾರ್ವಜನಿಕರಿಗೆ ಮೂರು ದಿನಕ್ಕೊಮ್ಮೆ ಕುಡಿಯುವ ನೀರನ್ನು ಸರಬರಾಜು ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.