ಬೆಳಗಾವಿ : ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಯ ವೀರಸೌಧದಲ್ಲಿ ಮಹಾತ್ಮ ಗಾಂಧಿಯವರ ಪುತ್ಥಳಿ ಅನಾವರಣಗೊಳಿಸಿದ್ದಾರೆ.
ಗಾಂಧಿ ಭಾರತ – ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಂಗವಾಗಿ ಇಂದು ವೀರಸೌಧದಲ್ಲಿ ಮಹಾತ್ಮ ಗಾಂಧಿಯವರ ಪುತ್ಥಳಿ ಅನಾವರಣಗೊಳಿಸಿದ್ದಾರೆ, ಬಳಿಕ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಎಐಸಿಸಿ ಸಭೆ ನಡೆದಿದ್ದ ಸ್ಥಳದ ಸಭಾಂಗಣದಲ್ಲಿನ ಫೋಟೋ ಗ್ಯಾಲರಿಯನ್ನು ಚರಕ ನೂಲುವ ಮೂಲಕ ಉದ್ಘಾಟಿಸಿ, ನಂತರ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿದ್ದಾರೆ.
1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಡಿಸೆಂಬರ್ 27ರಂದು ಸುವರ್ಣಸೌಧದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಗೊಳಿಸಲಾಗುವುದು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ಸಿಗೆ ಕೈಜೋಡಿಸಬೇಕಾಗಿ ಎಂದು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.