
ಯಲ್ಲಾಪುರ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ, ಗಾಯಾಳು ಪೊಲೀಸರ ಆರೋಗ್ಯ ವಿಚಾರಿಸಿದ ನಂತರ, ಯಲ್ಲಾಪುರ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕರಣದ ಕುರಿತು ಮಾಹಿತಿ ನೀಡಿದರು.

ಪ್ರಕರಣ ಬೇಧಿಸಲು ಇಲಾಖೆಯಿಂದ ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಅಪಹರಣಕ್ಕೊಳಗಾದವನ ಪ್ರಾಣಕ್ಕೆ ಅಪಾಯವಾಗದಂತೆ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದೇವೆ. ಈಗಾಗಲೇ ಹತ್ತು ಜನರನ್ನು ಬಂಧಿಸಲಾಗಿದ್ದು, ಇನ್ನುಳಿದ ಇಬ್ಬರು ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದರು. ಆರೋಪಿಗಳ ಪತ್ತೆಗೆ ಶ್ರಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ, ಡಿ.ವೈ.ಎಸ್.ಪಿಗಳಾದ ಗಣೇಶ, ಶಿವಾನಂದ, ಸಿಪಿಐಗಳಾದ ರಮೇಶ ಹಾನಾಪುರ, ಜಯಪಾಲ ಪಾಟೀಲ, ಪಿಎಸ್ಐ ಬಸವರಾಜ ಇತರರಿದ್ದರು.