ಬೆಂಗಳೂರು: ಕಂದಾಯ ಸಚಿವ ಕೃಷ್ಣಭೈರೇಗೌಡ ಭ್ರಷ್ಟಾಚಾರದಲ್ಲಿ ತೊಡಗಿರುವಂತ ಅಧಿಕಾರಿಗಳ ರಕ್ಷಣಗೆ ನಿಂತಿದ್ದಾರೆ. ಅವರ ವಿರುದ್ಧ ಕ್ರಮಕ್ಕೆ ಸೂಚಿಸುವಂತೆ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ಎಂಬುವರು ದೂರು ನೀಡಿದ್ದಾರೆ.
ಇಂದು ರಾಜ್ಯಪಾಲರಿಗೆ ದೂರು ನೀಡಿರುವಂತ ದಿನೇಶ್ ಕಲ್ಲಹಳ್ಳಿ ಅವರು, ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಭ್ರಷ್ಟಾಚಾರದಲ್ಲಿ ತೊಡಗಿರುವಂತ ಅಧಿಕಾರಿಗಳ ರಕ್ಷಣೆ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತ ದೂರಿನಲ್ಲಿ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲಿಕುಂಟೆ ಗ್ರಾಮದ ಜಮೀನು ಅವ್ಯವಹಾರ ನಡೆದಿದೆ. ಸರ್ವೆ ನಂಬರ್.150ರಲ್ಲಿ ಅಕ್ರಮವಾಗಿ ಜಮೀನು ಮಾರಾಟ ಮಾಡಲಾಗಿದೆ. ಪೋಡಿ, ನಕ್ಷೆ ಆಗದೇ ಜಮೀನು ಮಾರಾಟ ಮಾಡಲಾಗಿದೆ. ಸಾಗುವಳಿದಾರರು ಅಕ್ರಮವಾಗಿ ಜಮೀನು ಮಾರಾಟ ಮಾಡಿದ್ದಾರೆ ಎಂಬುದಾಗಿ ಆರೋಪಿಸಿದ್ದಾರೆ.
ಇನ್ನೂ ಡೆವೆಲಪರ್ಸ್ ಕಂಪನಿಯೊಂದಕ್ಕೆ ಸಾಗುವಳಿದಾರರು ಅಕ್ರಮವಾಗಿ ಜಮೀನು ಮಾರಾಟ ಮಾಡಿದ್ದಾರೆ. ತಹಶೀಲ್ದಾರ್, ಉಪ ವಿಭಾಗಾಧಿಕಾರಿ ಮೇಲೆ ಕ್ರಮ ಕೈಗೊಳ್ಳಬೇಕು. ಹಗರಣದ ಬಗ್ಗೆ ಸೂಕ್ತ ರೀತಿಯಲ್ಲಿ ತನಿಕೆಗೆ ಕ್ರಮ ವಹಿಸಲು ಸೂಚಿಸಬೇಕು ಎಂಬುದಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ನೀಡಿರುವಂತ ದೂರಿನಲ್ಲಿ ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.