ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ- ಆಸ್ಪತ್ರೆಗೆ ದಾಖಲು

Spread the love

ಮುಂಬೈ : ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಗೆ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದೆ. ಸೈಫ್‌ ಅಲಿ ಖಾನ್‌ಗೆ ಚಾಕುವಿನಿಂದ ಇರಿದು, ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪತ್ನಿ ಕರೀನಾ ಕಪೂರ್‌ ಮತ್ತು ಇಬ್ಬರೂ ಮಕ್ಕಳು ಸೇಫ್‌ ಆಗಿದ್ದಾರೆ.