`ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ಸಾವು ಕೇಸ್ : ನಿರ್ಮಾಪಕ, ನಿರ್ದೇಶಕ ಸೇರಿ ಐವರ ವಿರುದ್ಧ `FIR’ ದಾಖಲು

Spread the love

ಬೆಂಗಳೂರು : ಸ್ಯಾಂಡಲ್ ವುಡ್ ನ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿನಿಮಾ ನಿರ್ಮಾಪಕ, ನಿರ್ದೇಶಕ ಸೇರಿದಂತೆ ಐದು ಜನರ ವಿರುದ್ಧ ಬಿಡಿದಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಲವ್ ಯೂ ರಚ್ಚು ಸಿನಿಮಾದ ನಿರ್ದೇಶಕ ಶಂಕರ ಎ1, ನಿರ್ಮಾಪಕ ಗುರುದೇಶಪಾಂಡೆ ಎ2 ಆರೋಪಿ, ಸಿನಿಮಾದ ಸಾಹಸ ನಿರ್ದೇಶಕ ವಿನೋದ್ ಕುಮಾರ್ ಎ3 ಆರೋಪಿ, ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಎ4 ಆರೋಪಿ, ಕ್ರೇನ್ ಅಪರೇಟರ ಮಹದೇವ್ ಎ 5 ಆರೋಪಿ ಎಂದು ಬಿಡದಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ನಿರ್ಮಾಪಕ ಗುರುದೇಶ ಪಾಂಡೆ ಹಾಗೂ ಪ್ರೋಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಘಟನೆ ಬಳಿಕ ಪರಾರಿಯಾಗಿದ್ದು, ಬಿಡದಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಲವ್​ ಯೂ ರಚ್ಚು ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ರಚಿತಾ ರಾಮ್ ಈ ಚಿತ್ರದ ನಾಯಕಿ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗುರು ದೇಶಪಾಂಡೆ ಚಿತ್ರದ ನಿರ್ಮಾಪಕ. ಮಣಿಕಾಂತ್​ ಕದ್ರಿ ಅವರು ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ಲವ್​​ ಯೂ ರಚ್ಚು ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ (26) ಮೃತಪಟ್ಟಿದ್ದಾರೆ.