ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

Spread the love

ಮುಂಡಗೋಡ : ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದವರು ಸೋಮವಾರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. 

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕ ಸಂಘದ ಗೌರವಾಧ್ಯಕ್ಷರಾದ ಗೋಣಿಬಸಪ್ಪ ಕೊರಚರ, ಅಧ್ಯಕ್ಷರಾದ ಶಿವಾನಂದ ನಾಯ್ಕ, ಉಪಾಧ್ಯಕ್ಷರಾದ ಕಾವೇರಿ ಶಿಂಧೆ, ಖಜಾಂಚಿ ಗೋಪಾಲ ಎಂ, ಪ್ರಧಾನ ಕಾರ್ಯದರ್ಶಿ ಹನುಮಂತ ಕಡಕೋಳ, ಸಂಘಟನಾ ಕಾರ್ಯದರ್ಶಿ ಶಿವರಾಜ ಸೂರಿನ್, ಸದಸ್ಯರಾದ ಗೋವಿಂದ ರಾಥೋಡ್,  ಪವಿತ್ರ ಕೆ.ವಿ., ಶ್ರೇಯಾ ಶಾನಭಾಗ್, ಪ್ರಜ್ವಲ್ ನಾವಿ ಇದ್ದರು.
ಬೇಡಿಕೆ ಈಡೇರುವವರೆಗೆ ಎಲ್ಲಾ ಬಗೆಯ ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಶನ್ ನ್ನು, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಶಾಸಕರಿಗೆ ಮನವಿ :  ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕಾ ಸಂಘದವರು ಶಾಸಕರಾದ ಶಿವರಾಮ ಹೆಬ್ಬಾರ್ ಅವರಿಗೆ ಬೇಡಿಕೆಗಳ ಈಡೇರಿಕೆಯ ಮನವಿಯನ್ನು ಸೋಮವಾರ ನೀಡಿದರು.