ನಾಳೆ ಬಿಜೆಪಿಯಿಂದ ದೆಹಲಿ ಮುಖ್ಯಮಂತ್ರಿ ಹೆಸರು ಘೋಷಣೆ: ವರದಿ 

Spread the love

ನವದೆಹಲಿ: 27 ವರ್ಷಗಳ ಸುದೀರ್ಘ ಕಾಯುವಿಕೆಯನ್ನು ಕೊನೆಗೊಳಿಸಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ, ನಾಳೆಯ ಸೋಮವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ತನ್ನ ಮುಖ್ಯಮಂತ್ರಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರದ ನೇತೃತ್ವ ವಹಿಸುವ ನಾಯಕನನ್ನು ಅಂತಿಮಗೊಳಿಸಲು ದೆಹಲಿಯಲ್ಲಿ ಉನ್ನತ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಆದಾಗ್ಯೂ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಪರ್ವೇಶ್ ವರ್ಮಾ ಸೇರಿದಂತೆ ಹಲವಾರು ಹೆಸರುಗಳು ಊಹಾಪೋಹಗಳಾಗಿದ್ದರೂ ಪಕ್ಷದ ನಾಯಕತ್ವವು ಮೌನವಹಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಿಂದ ಹಿಂದಿರುಗಿದ ನಂತರ ದೆಹಲಿಯಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸುವುದಾಗಿ ಪಕ್ಷ ಘೋಷಿಸಿತ್ತು. ಹೀಗಾಗಿ ನಾಳೆ ದೆಹಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಅಂತ ಹೆಸರನ್ನು ಅಂತಿಮಗೊಳಿಸೋ ಸಾಧ್ಯತೆ ಇದೆ.