
ಮುಂಡಗೋಡ : ಧರ್ಮಸ್ಥಳದ ಸೌಜನ್ಯ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಆಗಬೇಕು ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಚಿದಾನಂದ ಹರಿಜನ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ಧರ್ಮಸ್ಥಳದ ಸೌಜನ್ಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳು ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಷೆ ಆಗಲೇಬೇಕು. ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆ ನಡೆಸಿ ತಪ್ಪಿತಸ್ಥರನ್ನು ಜೈಲಿಗೆ ಕಳಿಸಬೇಕು ಎಂದು ಅವರು ಆಗ್ರಹಿಸಿದರು.
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ರಾಜ್ಯಾದ್ಯಂತ ತಲ್ಲಣ ಮೂಡಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.