ಗೋಕರ್ಣದ ಮಹಾಬಲೇಶ್ವರನಿಗೆ ಪೂಜೆ ಸಲ್ಲಿಸಿದ ಗೃಹ ಸಚಿವ ಡಾ.ಪರಮೇಶ್ವರ

Share Now

ಕಾರವಾರ : ಪುರಾಣ ಪ್ರಸಿದ್ದ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಬುಧವಾರ ರಾಜ್ಯದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಭೇಟಿ ನೀಡಿ ಪೂಜೆ ಸಲ್ಲಿಸಿದರು.  

ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಗೋಕರ್ಣದ ಮಹಾಗಣಪತಿಗೆ ಪೂಜೆ ಸಲ್ಲಿಸಿ ನಂತರ ಮಹಾಬಲೇಶ್ವರ ದೇವರ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಅಧಿಕಾರಿಗಳು ಇದ್ದರು.