
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಉಡುಪಿ ಜಿಲ್ಲೆಗೆ ಪ್ರಥಮವನ್ನು ಪಡೆದುಕೊಂಡಿದೆ. ಉತ್ತರಕನ್ನಡ 6ನೇ ಸ್ಥಾನ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು, ವಾಣಿಜ್ಯ ವಿಭಾಿ ಶೇ.76.07ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಮೊದಲ ರ‌್ಯಾಂಕ್ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆ ಪಿಯು ಕಾಲೇಜಿನ ವಿದ್ಯಾರ್ಥಿನಿ ಆಗಿದ್ದಾರೆ ಎಂದರು.
6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ.
ಉತ್ತರಕನ್ನಡ (ಶೇ.82.93) 6ನೇ ಸ್ಥಾನ ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%) ಪಡೆದುಕೊಂಡಿದೆ.
ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನ ಶ್ರೇಯಾ – 597 ಅಂಕ ಪಡೆದು ಮೊದಲ ಸ್ಥಾನ ಪಡೆದರೆ ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದೂ ಪಿಯು ಕಾಲೇಜಿನ ಸಂಜನಾ ಬಾಯಿ 597 ಮೊದಲ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ 599 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ತಮ್ಮ ಕರ್ನಾಟಕ ದ್ವಿತೀಯ ಪಿಯುಸಿ ಸ್ಕೋರ್ ಕಾರ್ಡ್ ಗಳನ್ನು ಕೆಎಸ್ ಇಎಬಿಯ ಅಧಿಕೃತ ವೆಬ್ ಸೈಟ್ ನಲ್ಲಿ karresults.nic.in ಮತ್ತು kseab.karnataka.gov.in ಪರಿಶೀಲಿಸಬಹುದು. ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು.
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025: ಆನ್ಲೈನ್ನಲ್ಲಿ ಫಲಿತಾಂಶ ಚೆಕ್ ಮಾಡುವುದು ಹೇಗೆ?
ಹಂತ 1: ಅಧಿಕೃತ ವೆಬ್ಸೈಟ್ಗಳಲ್ಲಿ ಒಂದಕ್ಕೆ ಭೇಟಿ ನೀಡಿ – karresults.nic.in ಅಥವಾ kseab.karnataka.gov.in/english.
ಹಂತ 2: ಮುಖಪುಟದಲ್ಲಿ, “ದ್ವಿತೀಯ ಪಿಯುಸಿ ಫಲಿತಾಂಶ 2025” ಲಿಂಕ್ ಅನ್ನು ನೋಡಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ.
ಹಂತ 3: ನಿಮ್ಮ ರೋಲ್ ಸಂಖ್ಯೆ, ನೋಂದಣಿ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ಅಗತ್ಯಕ್ಕೆ ತಕ್ಕಂತೆ ನಮೂದಿಸಿ.
ಹಂತ 4: ನಿಮ್ಮ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ; ವಿಜ್ಞಾನ, ವಾಣಿಜ್ಯ, ಅಥವಾ ಕಲೆ ಮತ್ತು ಸಲ್ಲಿಸು ಕ್ಲಿಕ್ ಮಾಡಿ.