
ಮುಂಡಗೋಡ : ಗಾಂಜಾ ಮಾರಾಟ ಮಾಡಲು ಪ್ರಯತ್ನಿಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ತಾಲೂಕಿನ ರಾಮಾಪುರ ಕ್ರಾಸ್ ಬಳಿ ಬಂಧಿಸಿದ್ದಾರೆ.

ಮುಂಡಗೋಡ ಯಲ್ಲಾಪುರ ರಸ್ತೆಯ ಮಹಮ್ಮದ್ ಅನೀಸ್ ಇಜಾಜ ಅಹ್ಮದ ಬೇಗ(20) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿತನಿಂದ 902 ಗ್ರಾಂ. ಗಾಂಜಾ ಹಾಗೂ 200ರೂ. ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾದ ಮೌಲ್ಯ ಐವತ್ತು ಸಾವಿರ ರೂಪಾಯಿ ಎಂದು ಹೇಳಲಾಗಿದೆ. ಸಿಪಿಐ ರಂಗನಾಥ ನೀಲಮ್ಮನವರ ನೇತೃತ್ವದಲ್ಲಿ ಪಿಎಸ್ಐ ಪರಶುರಾಮ ಮಿರ್ಜಗಿ, ಪಿಎಸ್ಐ ಹನುಮಂತಪ್ಪ ಸಿಬ್ಬಂದಿಗಳಾದ ಗಣಪತಿ ಹುನ್ನಳ್ಳಿ, ಕೋಟೇಶ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ್, ಮಾಂತೇಶ್ ಮುಧೋಳ, ಬಸವರಾಜ ಒಡೆಯರ್ ಈ ಕಾರ್ಯಾಚರಣೆಯಲ್ಲಿದ್ದರು.