
ನವದೆಹಲಿ: ಪಹಲ್ಗಾಮ್ ದಾಳಿಗೆ ಭಾರತ ಹೆದರುವುದಿಲ್ಲ: ಭಯೋತ್ಪಾದಕರ ವಿರುದ್ಧ ಉಗ್ರ ಹೋರಾಟ ಮುಂದುವರೆಯಲಿದೆ. ಪಹಲ್ಗಾಮ್ ದಾಳಿ ಕೋರರನ್ನು ಸದೆ ಬಡಿಯದೇ ಬಿಡುವುದಿಲ್ಲ ಎಂಬುದಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಜ್ಞೆ ಮಾಡಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಹೇಡಿತನದ ಕೃತ್ಯದಲ್ಲಿ ನಾವು ಅನೇಕ ಮುಗ್ಧ ಜೀವಗಳನ್ನು ಕಳೆದುಕೊಂಡಿದ್ದೇವೆ. ನಮಗೆ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ನನ್ನ ಸಂತಾಪ ಸೂಚಿಸುತ್ತೇನೆ ಎಂದರು.
ಭಯೋತ್ಪಾದನೆಯ ವಿರುದ್ಧ ಭಾರತದ ಸಂಕಲ್ಪವನ್ನು ನಾನು ಪುನರಾವರ್ತಿಸಲು ಬಯಸುತ್ತೇನೆ. ಭಯೋತ್ಪಾದನೆಯ ಬಗ್ಗೆ ನಮಗೆ ಶೂನ್ಯ ಸಹಿಷ್ಣುತೆಯ ನೀತಿ ಇದೆ. ಸರ್ಕಾರವು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ನಾನು ದೇಶವಾಸಿಗಳಿಗೆ ಭರವಸೆ ನೀಡಲು ಬಯಸುತ್ತೇನೆ. ಈ ಕೃತ್ಯದ ಅಪರಾಧಿಗಳನ್ನು ಮಾತ್ರವಲ್ಲದೆ ತೆರೆಮರೆಯಲ್ಲಿರುವವರನ್ನು ಸಹ ನಾವು ಹೊಡೆದುರುಳಿಸುತ್ತೇವೆ. ಆರೋಪಿಗಳು ಶೀಘ್ರದಲ್ಲೇ ಸ್ಪಷ್ಟವಾದ ಪ್ರತ್ಯುತ್ತರ ನೀಡುತ್ತೇವೆ. ಕಾದು ನೋಡಿ ಎಂಬುದಾಗಿ ನಾನು ದೇಶಕ್ಕೆ ಭರವಸೆ ನೀಡಲು ಬಯಸುತ್ತೇನೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಕಾರಣರಾದವರಿಗೆ ಭಾರತ ಶೀಘ್ರದಲ್ಲೇ ಸೂಕ್ತ ಉತ್ತರ ನೀಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬುಧವಾರ ಹೇಳಿದ್ದಾರೆ.