ಜಿಂದಾಲ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ 10 ದಿನಗಳ ಪ್ರಕೃತಿ ಚಿಕಿತ್ಸೆ!

Spread the love

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಗರದ ಜಿಂದಾಲ್‌ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಇಂದು ದಾಖಲಾಗಲಿದ್ದಾರೆ. ಹತ್ತು ದಿನಗಳ ಕಾಲ ಅವರು ಅಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ‘ಇಂದು ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗುವ ಸಿದ್ದರಾಮಯ್ಯ ಅವರು, ಆಗಸ್ಟ್‌ 31ರ ಸಂಜೆ ಅಲ್ಲಿಂದ ವಾಪಸಾಗಲಿದ್ದಾರೆ.

ಹತ್ತು ದಿನಗಳ ಕಾಲ ಪ್ರಕೃತಿ ಚಿಕಿತ್ಸೆಗೆ ಹೋಗುತ್ತಿದ್ದೇನೆ. ನೆಲಮಂಗಲ ಬಳಿಯ ಜಿಂದಾಲ್ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಹತ್ತು ದಿನಗಳ ಕಾಲ ನಾನು ಮನೆಯಲ್ಲಿ ಇರುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೆಹರು ಮತ್ತು ವಾಜಪೇಯಿ ಮಾದರಿ ನಾಯಕರು ಎಂಬ ಹೇಳಿಕೆ ವಿಚಾರದಲ್ಲಿ ಸಿ.ಟಿ.ರವಿಗೆ ಸ್ವಲ್ಪ ಜ್ಞಾನೋದಯ ಆದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ.