
ಹೊಸಪೇಟೆ : ವಿಶ್ವವಿಖ್ಯಾತ ಹಂಪಿಗೆ ಇಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಹಂಪಿಯ ಶ್ರೀ ವಿರೂಪಾಕ್ಷ ದೇಗುಲ, ಲೋಟಸ್ ಮಹಲ್ ವಿಜಯ ವಿಠ್ಠಲ ದೇಗುಲ ವೀಕ್ಷಿಸಿದ್ದಾರೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ವಿರೂಪಾಕ್ಷೇಶ್ವರ, ಪಾರ್ವತಿ, ಭುವನೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆಯ ಹಂಪಿಯ ವಿದ್ಯಾರಣ್ಯ ಪೀಠದ ವಿದ್ಯಾರಣ್ಯ ಭಾರತಿ ಶ್ರೀಗಳು ಉಪಸ್ಥಿತಿರಿದ್ದರು. ವೆಂಕಯ್ಯ ನಾಯ್ಡು ಅವರ ಭೇಟಿ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇಂದಿನ ವಿವಿಧ ಕಾರ್ಯಕ್ರಮಗಳ ಬಳಿಕ ನಾಳೆ ಹುಬ್ಬಳ್ಳಿಗೆ ಪ್ರಯಾಣ ಬೆಳಸಲಿದ್ದಾರೆ.