
ನವದೆಹಲಿ : ನಾಳೆ ಬೆಳಗ್ಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿಯ ಎಲ್ಲಾ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಇನ್ನು ಈ ಸಭೆಯಲ್ಲಿ ಹಲವು ಪ್ರಮುಖ ವಿಷಯಗಳನ್ನ ಚರ್ಚಿಸಲಾಗುವುದು ಎಂದು ಹೇಳಲಾಗ್ತಿದೆ.
ಬಲ್ಲ ಮೂಲಗಳ ಪ್ರಕಾರ, ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಳ್ವಿಕೆಯ ನಂತ್ರ ಕಾಶ್ಮೀರದಲ್ಲಿನ ಪರಿಸ್ಥಿತಿಯ ಕುರಿತು ಚರ್ಚೆಯು ಸಭೆಯಲ್ಲಿ ಮುಖ್ಯ ವಿಷಯವಾಗಿರುತ್ತದೆ. ಇನ್ನು ರೈತರ ಆಂದೋಲನ ಮತ್ತು ರೈತ ಮಸೂದೆಗಳ ಬಗ್ಗೆಯೂ ಚರ್ಚೆ ನಡೆಯಲಿದೆ.
ದೇಶದಲ್ಲಿ ರೈತರ ಚಳುವಳಿ ತೀವ್ರಗೊಳ್ಳುತ್ತಿರುವುದು ಗಮನಿಸಬೇಕಾದ ಸಂಗತಿ. ಅದೇ ಸಮಯದಲ್ಲಿ, ಕೇಂದ್ರ ಸರ್ಕಾರ ಇನ್ನೂ ಎಲ್ಲಾ ಮೂರು ರೈತ ಮಸೂದೆಗಳಿಗೆ ಸಂಬಂಧಿಸಿದಂತೆ ತನ್ನ ನಿಲುವಿನಲ್ಲಿ ಅಚಲವಾಗಿದೆ. ನಾಳಿನ ಸಭೆಯಲ್ಲಿ ಈ ವಿಷಯದ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದೆ.