ಮೈಸೂರು ಪ್ರಕರಣ : ತಮಿಳುನಾಡಿನಲ್ಲಿ ಅಡಗಿದ್ದ 7ನೇ ಆರೋಪಿ ಸೆರೆ

Spread the love

ಮೈಸೂರು : ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಏಳನೇ ಆರೋಪಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಆಗಸ್ಟ್ 23 ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಘಟನೆ ನಡೆದ ಮೂರು ದಿನಗಳಲ್ಲಿ 6 ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಿದ್ದರು. ತಲೆಮರೆಸಿಕೊಂಡಿದ್ದ ಏಳನೇ ಆರೋಪಿಯ ಪತ್ತೆಗಾಗಿ ಮೈಸೂರು ನಗರ ಪೊಲೀಸ್ ಆಯುಕ್ತರು ಎಸಿಪಿ ನೇತೃತ್ವದಲ್ಲಿ ತಂಡ ರಚಿಸಿದ್ದರು.

ನಿರಂತರ ಕಾರ್ಯಾಚರಣೆ ಬಳಿಕ ತಮಿಳುನಾಡಿನ ಗ್ರಾಮವೊಂದರಲ್ಲಿ ಅಡಗಿಕೊಂಡಿದ್ದ ಏಳನೇ ಆರೋಪಿಯನ್ನು ಪತ್ತೆ ಹಚ್ಚಿ ಮೈಸೂರಿಗೆ ಕರೆ ತಂದಿದ್ದಾರೆ.

ಪ್ರಕರಣ ಸಂಬಂಧ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.