ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 181 ಸೇರಿ 504 ಪ್ರಕರಣ ಪತ್ತೆ: 20 ಸಾವು!

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 504 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,973,899ಕ್ಕೆ ಏರಿಕೆಯಾಗಿದೆ.

ಮಹಾಮಾರಿಗೆ ಇಂದು 20 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,746ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು 181 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,45,671ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 893 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,23,320ಕ್ಕೆ ಏರಿಕೆಯಾಗಿದೆ. ಇನ್ನು12,804 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,03,800 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 504 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.48ಕ್ಕೆ ಇಳಿದಿದೆ.