
ನವದೆಹಲಿ: ಕೋವಿಡ್ ಲಸಿಕೆ ಅಭಿಯಾನದಲ್ಲಿ ಭಾರತ ಮತ್ತೊಂದು ಮೈಲಿಗಲ್ಲನ್ನು ದಾಟಿದೆ, ಇದುವರೆಗೆ ಒಟ್ಟು 86 ಕೋಟಿಗಿಂತಲೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಇದು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮತ್ತೊಂದು ಸಾಧನೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕಳೆದ 24 ಗಂಟೆಗಳಲ್ಲಿ 38 ಲಕ್ಷ 18 ಸಾವಿರಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.
ದೇಶಕ್ಕೆ ಅಭಿನಂದನೆಗಳು, ಒಂದೇ ದಿನ 1 ಕೋಟಿ ಕೋವಿಡ್-19 ಲಸಿಕೆ ಡೋಸ್ ಗಳನ್ನು ನೀಡಿದ್ದೇವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಕೋವಿಡ್ ಲಸಿಕೆ ವಿತರಣೆಯಲ್ಲಿ ಭಾರತ ಮಹತ್ವದ ಮೈಲಿಗಲ್ಲನ್ನು 5ನೇ ಬಾರಿ ಸಾಧಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.