ಮಮತಾ ಬ್ಯಾನರ್ಜಿಗೆ ಅಗ್ನಿ ಪರೀಕ್ಷೆ: ಭವಾನಿಪುರದಲ್ಲಿ ಬಿಗಿ ಭದ್ರತೆಯಲ್ಲಿ ಬಿರುಸಿನ ಮತದಾನ

Spread the love

ಕೊಲ್ಕೊತ್ತಾ: ಮಮತಾ ಬ್ಯಾನರ್ಜಿಗೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ.

ಈಗಾಗಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣೆ ಹಿಂಸಾಚಾರಕ್ಕೆ ಹೆಸರುವಾಸಿಯಾದ ಬಂಗಾಳದಲ್ಲಿ ಸುಗಮವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಆಯೋಗ ಬಿಗಿ ಕ್ರಮ ಕೈಗೊಂಡಿದೆ.

ಈ ಹಿಂದೆ ಎರಡು ಬಾರಿ ಮಮತಾ ಅವರನ್ನು ಈ ಕ್ಷೇತ್ರದ ಜನ ಆಯ್ಕೆ ಮಾಡಿದ್ದರು. ಬದಲಾದ ರಾಜಕೀಯ ಲೆಕ್ಕಾಚಾರದಲ್ಲಿ ಮಮತಾ ಕಳೆದ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರ ಪಕ್ಷ ಟಿಎಂಸಿ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾದ ಮಮತಾ ಅವರಿಗೆ ಸ್ಥಾನ ಉಳಿಸಿಕೊಳ್ಳಲು ಈ ಉಪಚುನಾವಣೆ ಗೆಲುವು ಅನಿವಾರ್ಯವಾಗಿದೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾದ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ಮತ್ತು ಸಿಪಿಎಂನ ಶ್ರೀಜಿಬ್ ಬಿಸ್ವಾಸ್ ತೀವ್ರ ಸ್ಪರ್ಧೆಯೊಡ್ಡಿದ್ದಾರೆ.

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಝೆಯವರೆಗೂ ನಡೆಯಲಿದೆ. ಸಿಎಂ ಕುರ್ಚಿಯನ್ನು ಉಳಿಸಿಕೊಳ್ಳಲು ಮಮತಾ ಹೋರಾಡುತ್ತಿದ್ದಾರೆ,

ದಕ್ಷಿಣ ಕೊಲ್ಕತ್ತಾದ ಭವಾನಿಪುರ್ ಮತ್ತು ಮುರ್ಷಿದಾಬಾದ್ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ಕ್ಷೇತ್ರಗಳಲ್ಲಿಯೂ ಉಪಚುನಾವಣೆಗೆ ಮತದಾನ ನಡೆಯುತ್ತಿದೆ. ಅಕ್ಟೋಬರ್ 3 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ.