
ಬೆಂಗಳೂರು : ಸಿವಿಲ್ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಪೊಲೀಸ್ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಸಿವಿಲ್ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ (ಪುರುಷ ಮತ್ತು ಮಹಿಳೆ) 545 ಹುದ್ದೆಗಳ ನೇಮಕಾತಿಗೆ ಅ.3ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
ಸುಮಾರು 14,100 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಅಭ್ಯರ್ಥಿಗಳಿಗೆ ಈಗಾಗಲೇ ಮಾಹಿತಿಯನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ವೆಬ್‍ಸೈಟ್ www.recruitment.ksp.gov.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಪೊಲೀಸ್ ಇಲಾಖೆಯು ಅಕ್ಟೋಬರ್ 3, 2021 ರಂದು ಲಿಖಿತ ಪರೀಕ್ಷೆಯನ್ನು ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ದಾವಣಗೆರೆ ಮತ್ತು ತುಮಕೂರು ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಿದೆ. ಪತ್ರಿಕೆ-1: ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12-30 ರವರೆಗೆ. ಪತ್ರಿಕೆ-2: ಮಧ್ಯಾಹ್ನ 3 ಗಂಟೆಯಿಂದ 04-30 ರವರೆಗೆ ನಡೆಯಲಿದೆ.