ಮಾತಿನ ಭರದಲ್ಲಿ ನಾಲಿಗೆ ಹರಿಬಿಟ್ಟ ಬಿಜೆಪಿ ಮುಖಂಡ; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ

Spread the love

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ಆರಂಭವಾಗಿದ್ದು, ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಂಜಯ್ ಪಾಟೀಲ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ನೈಟ್ ಪಾಲಿಟಿಕ್ಸ್ ಮಾಡಿ ಗೆದ್ದು ಬಂದಿದ್ದಾರೆ. ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ, ಆದರೆ ಅದನ್ನು ಬಿಜೆಪಿ ಮೇಲೆ ಹಾಕುವುದಕ್ಕೆ ನೋಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸತ್ಯ ಎದುರಿಸುವ ಶಕ್ತಿ ಇನ್ನೂ ಬರ್ತಿಲ್ಲ. ಶಾಸಕಿ ಆಗುವ ಮೊದಲು ನಾನು ನಿಮ್ಮ ಮಗಳು ಎಂದಿದ್ದರು. ಚಾಂದ್ ತಾರೆ ತೋಡ್ ಕೇ ಲಾವೂಂಗಿ ಎಂದು ಹೇಳಿದ್ರು. ಕ್ಷೇತ್ರದ ಅಭಿವೃದ್ಧಿಗಾಗಿ ಭರವಸೆಗಳ ಮಹಾಪೂರವನ್ನೇ ಹರಿಸಿದರು. ಆದರೆ ಗೆದ್ದು ಬಂದ ಮೇಲೆ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಈಗ ಭಾವನಾತ್ಮಕ ವಿಚಾರವಾಗಿ ರಾಜಕಿಯ ಮಾಡಲು ಹೊರಟಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಗೆ ಜನರೇ ಪ್ರತಿಕ್ರಿಯೆಗಳನ್ನು ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಮಹಿಳಾ ಶಾಸಕಿ ವಿರುದ್ಧ ಬಿಜೆಪಿ ಮುಖಂಡನ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.