ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ : ಸರ್ಕಾರಕ್ಕೆ ಬೃಹತ್ ಪ್ರತಿಭಟನೆಯ ಎಚ್ಚರಿಕೆ ನೀಡಿದ ಜಯಮೃತ್ಯುಂಜಯ ಸ್ವಾಮೀಜಿ

Spread the love

ದಾವಣಗೆರೆ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟದ ಕೂಗು ಜೋರಾಗಿದ್ದು, ರಾಜ್ಯ ಸರ್ಕಾರಕ್ಕೆ ಪ್ರತಿಭಟನೆಯ ಎಚ್ಚರಿಕೆ ನೀಡಲಾಗಿದೆ.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಚಿವರಿಂದ ಸಕಾರಾತ್ಮಕ ಉತ್ತರ ಬರುವ ನಿರೀಕ್ಷೆ ಇದೆ. ಒಂದು ವೇಳೆ ನಾಳೆ ಸ್ಪಷ್ಟ ನಿಲುವು ತಿಳಿಸದಿದ್ದರೆ ಹೋರಾಟ ಮಾಡುತ್ತೇವೆ. ಬೆಂಗಳೂರಿನಲ್ಲಿ 30 ಲಕ್ಷ ಜನರನ್ನ ಸೇರಿಸಿ ಬೃಹತ್ ಧರಣಿ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ನಾಳೆ ಬೆಂಗಳೂರಿನಲ್ಲಿ 11 ಗಂಟೆಗೆ ಪಂಚಮಸಾಲಿ ಸಮುದಾಯದ ಮುಖಂಡರ ಸಭೆ ಇದೆ. ನಮ್ಮ ಸಮುದಾಯಕ್ಕೆ ಮೀಸಲಾತಿ ವಿಚಾರ ಅಂತಿಮವಾಗುತ್ತೆ. ನಾಳೆ ಬೆಳಗ್ಗೆ 11 ಗಂಟೆಯ ಒಳಗೆ ಸಕಾರಾತ್ಮಕ ಉತ್ತರ ಬರುವ ನಿರೀಕ್ಷೆ ಇದೆ, ಒಂದು ವೇಳೆ ನಾಳೆ ಸ್ಪಷ್ಟ ನಿಲುವು ತಿಳಿಸದಿದ್ದರೆ ಬೆಂಗಳೂರಿನಲ್ಲಿ 30 ಲಕ್ಷ ಜನರನ್ನ ಸೇರಿಸಿ ಬೃಹತ್ ಧರಣಿ ನಡೆಸುತ್ತೇವೆ ಎಂದು ದಾವಣಗೆರೆಯಲ್ಲಿ ರಾಜ್ಯ ಸರ್ಕಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.