Headlines

ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಲೀನಾ ಸಿದ್ಧಿಗೆ ತೃತೀಯ ಸ್ಥಾನ

Spread the love

ದಾಂಡೇಲಿ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿ ಕು. ಲೀನಾ ಸಿದ್ಧಿ ಇವರು ಉತ್ತರ ಪ್ರದೇಶದ ಅಮೇಥಿಯಲ್ಲಿ ರೆಸಲಿಂಗ್ ಫೆಡರೇಷನ್ ಆಫ್ ಇಂಡಿಯಾ ಇವರು ಸಂಘಟಿಸಿದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಪಾಲ್ಗೊಂಡು 65 ಕೆ.ಜಿ. ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಇವರ ಸಾಧನೆಗೆ ಪ್ರಾಚಾರ್ಯ ಡಾ. ಎಂ.ಡಿ. ಒಕ್ಕುಂದ, ಕ್ರೀಡಾ ಸಂಚಾಲಕರಾದ ಡಾ. ಎನ್.ಎಂ. ಜಂಗೂಭಾಯಿ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಲೀನಾ ಸಿದ್ದಿಯವರು ಈ ಹಿಂದೆಯು ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆಯನ್ನು ಮಾಡಿದ್ದರು.