ಅ.17ರಿಂದ ಸಿಎಂ ಬಸವರಾಜ ಬೊಮ್ಮಾಯಿ ‘ಹಾನಗಲ್ ಉಪ ಚುನಾವಣೆ’ ಪ್ರಚಾರ

Share Now

ಬೆಂಗಳೂರು : ಉಪಚುನಾವಣೆ ಪ್ರಯುಕ್ತ ಅಕ್ಟೋಬರ್ 17 ರಿಂದ ಹಾನಗಲ್ ತೆರಳಿ ಪ್ರಚಾರ ಕೈಗೊಳ್ಳಲಾಗುವುದು ನಂತರ ಸಿಂಧಗಿಯಲ್ಲಿ2 ದಿನಗಳ ಪ್ರಚಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಕಾವೇರಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 21 ರ ನಂತರ ಹಾನಗಲ್ ಮತ್ತು ಸಿಂಧಗಿಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು.

ಮಾಸಾಲಾ ಜಯರಾಂ ಅವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅವರು ಒಳ್ಳೆಯ ಸ್ನೇಹಿತರು ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ತಮ್ಮನ್ನು ಭೇಟಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಇದೇ ವೇಳೆ ಮುಖ್ಯಮಂತ್ರಿಗಳು ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯಗಳನ್ನು ಕೋರಿದರು.