
ಬೆಳಗಾವಿ: ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಪುತ್ರ ರಾಹುಲ್ ಅವರ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸತೀಶ್, ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆದಿದೆ ಎಂದು ಹೇಳಿದರು.
ನನ್ನ ಪುತ್ರ ರಾಹುಲ್ ಹಾಗೂ ಪುತ್ರಿ ಪ್ರಿಯಾಂಕಾ ಸಮಾಜಸೇವೆಯಲ್ಲಿ ನಿರತರಾಗಿದ್ದಾರೆ. ಯಮಕನಮರಡಿ ಕ್ಷೇತ್ರದಿಂದ ಯಾರನ್ನು ಕಣಕ್ಕಿಸಬೇಕು ಎಂದು ಪಕ್ಷ ತೀರ್ಮಾನ ಮಾಡುತ್ತದೆ ಎಂದು ಸತೀಶ್ ಹೇಳಿದರು.