ದೇಶದಲ್ಲಿ ನಿನ್ನೆಗಿಂತ ಇಂದು ಇಳಿಕೆ ಕಂಡ ಕೊರೋನಾ : 15,981 ಜನರಿಗೆ ಕೋವಿಡ್ ದೃಢ, 166 ಸೋಂಕಿತರು ಸಾವು

Share Now

ನವದೆಹಲಿ: ದೇಶದಲ್ಲಿ ನಿನ್ನೆಗೆ ಹೋಲಿಸಿದ್ರೇ.. ಇಂದು ಶೇ.5.22ರಷ್ಟು ಕೊರೋನಾ ಸೋಂಕಿನ ಪ್ರಕರಣ ಕಡಿಮೆ ವರದಿಯಾಗಿದೆ. ಇಂದು 15,981 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿನಿಂದ 122 ಜನರು ಸಾವನ್ನಪ್ಪಿರೋದಾಗಿ ವರದಿಯಿಂದ ತಿಳಿದು ಬಂದಿದೆ.

ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 15,981 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 3,40,53,573ಕ್ಕೆ ಏರಿಕೆಯಾಗಿದೆ. ಇದುವರೆಗೆ 3,33,99,961 ಸೋಂಕಿತರು ಗುಣಮುಖರಾದ ಕಾರಣ ದೇಶದಲ್ಲಿ 2,01,632 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಇನ್ನೂ ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 166 ಸೋಂಕಿತರು ಸಾವನ್ನಪ್ಪಿದ್ದಾರೆ. ಹೀಗಾಗಿ ಇದುವರೆಗೆ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 4,51,980ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ 24 ಗಂಟೆಯಲ್ಲಿ 8,36,118 ಜನರಿಗೆ ಲಸಿಕೆ ನೀಡಲಾಗಿದೆ. ಒಟ್ಟು 97,23,77,045 ಜನರಿಗೆ ಇದುವರೆಗೆ ಕೊರೋನಾ ಲಸಿಕೆ ನೀಡಲಾಗಿದೆ ಎಂದು ಮಾಹಿತಿಯಲ್ಲಿ ತಿಳಿಸಿದೆ.