ಮುಂಡಗೋಡ : ಬ್ಲಾಸಮ್ ಹಾಸ್ಪಿಟಲ್ ಹಾಗೂ ಗಿವ್ ಇಂಡಿಯಾ ಫೌಂಡೇಶನ್ ಅವರ ಸಹಯೋಗದಲ್ಲಿ ಆಯೋಜಿಸಲಾದ ಉಚಿತ ಕೋವಿಡ್ ಲಸಿಕಾ ಅಭಿಯಾನವನ್ನು ಇಂದು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ತಾಲೂಕಿನ ಮೈನಳ್ಳಿಯ ಗೆಳೆಯರ ಬಳಗ ಸಭಾಂಗಣದಲ್ಲಿ ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಶಿವರಾಮ ಹೆಬ್ಬಾರ ಅವರು ಕೊರೊನಾ ಸೋಂಕು ತೀವ್ರವಾಗಿ ಪ್ರಸರಣಗೊಳ್ಳುತ್ತಿದ್ದ ಸಮಯದಲ್ಲಿ ಜನರ ಜೀವಕ್ಕಾಗಿ ತಮ್ಮ ಹಾಗೂ ಕುಟುಂಬದ ಹಿತದೃಷ್ಟಿಯನ್ನೂ ಲೆಕ್ಕಿಸದೆ ಸರಕಾರದ ಜೊತೆ ಹೆಗಲಿಗೆ ಹೆಗಲು ಕೊಟ್ಟು ಸಹಕರಿಸಿದ ಆರೋಗ್ಯ ಇಲಾಖೆಯ ಎಲ್ಲ ಹಂತದ ಸಿಬ್ಬಂದಿ ಸೇವೆಯನ್ನು ಮರೆಯುವಂತಿಲ್ಲ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಮುಂಡಗೋಡ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್.ಇಂಗಳೆ, ಗ್ರಾಮ ಪಂಚಾಯತ ಅಧ್ಯಕ್ಷರಾದ ಬಸಯ್ಯ ನಡುವಿನಮನಿ, ಯುವ ಮೋರ್ಚಾ ಅಧ್ಯಕ್ಷರಾದ ಗಣೇಶ ಶಿರಾಲಿ, ಪ್ರಮುಖರಾದ ದೇವು ಪಾಟೀಲ್, ಸಂತೋಷ ಬೋಸ್ಲೆ, ಗ್ರಾಮ ಪಂಚಾಯತ ಸದಸ್ಯರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಗಣೇಶ ಶಿರಾಲಿ ರಾಜೀನಾಮೆ..?
ಮುಂಡಗೋಡ : ತಾಲೂಕಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಣೇಶ ಶಿರಾಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಮ್ಮ ವಾಟ್ಸಾಪ್ ಸ್ಟೇಟಸನಲ್ಲಿ ಬರೆದಿದ್ದಾರೆ.
ಕಳೆದ 2 ವರ್ಷಗಳಿಂದ ಯುವ ಮೋರ್ಚಾದ ಅಧ್ಯಕ್ಷನಾಗಿ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ ಪಕ್ಷ ನೀಡಿದ ಕೆಲಸವನ್ನು ಮಾಡಿದ್ದೇನೆ. ಕೆಲವು ನಾಯಕರು ನಮ್ಮ ಏಳಿಗೆಯನ್ನು ಸಹಿಸದೇ ಕಾರ್ಯಕರ್ತರು ಪಕ್ಷದ ಹಿರಿಯರಲ್ಲಿ ನಮ್ಮ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಕಾರಣದಿಂದ ಮನನೊಂದು ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಬರೆದಿದ್ದಾರೆ.