
ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ತೆರೆಯದಂತೆ ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಮಿತಿ ಸೂಚನೆ ನೀಡಿದೆ.
ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಮತ್ತು ಲಸಿಕೆಗಳು ಲಭ್ಯವಾಗುವವರೆಗೂ ಆನ್‌ಲೈನ್ ಶಿಕ್ಷಣ ಮುಂದುವರಿಸುವAತೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿರುವುದರಿಂದ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಆರ್ಗನೈಸ್ಡ್ ಮೆಡಿಸಿನ್ ಅಕಾಡೆಮಿಕ್ ಗಿಲ್ಡ್ ನ ಹಿರಿಯ ಆರೋಗ್ಯ ತಜ್ಞೆ ಸುನೀಲಾ ಗಾರ್ಗ್ ಹೇಳಿದ್ದರು. ಈ ನಡುವೆ ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಮಿತಿಯು ಪ್ರಾಥಮಿಕ ಶಾಲೆಗಳನ್ನು ತೆರೆಯದಂತೆ ಸೂಚನೆ ನೀಡಿದೆ.