
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಟ್ಟು ಮೊದಲಿನಂತೆ ವಿವರವಾಗಿ ಉತ್ತರ ಬರೆಯುವ ಪದ್ಧತಿ ಜಾರಿಗೆ ತರಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಿರ್ಧರಿಸಿದೆ. ಈ ನಿರ್ಧಾರಕ್ಕೆ ಶಿಕ್ಷಕರ ಸಂಘಟನೆಗಳಿಂದ ಪರ-ವಿರೋಧ ವ್ಯಕ್ತವಾಗಿದೆ.
ಮೊದಲಿನಿಂದಲೂ ವಿವರವಾದ ಉತ್ತರ ಪದ್ಧತಿಯೇ ಇತ್ತು. ಆದರೆ ಕೊರೋನಾ ಹಿನ್ನೆಲೆ 2021೨೧ರಲ್ಲಿ ಮಾತ್ರ ಬಹು ಆಯೆ ಪದ್ಧತಿಯಲ್ಲಿ ಪ್ರಶ್ನೆಗಳನ್ನು ನೀಡಲಾಗುವುದು ಎಂದು ಮಂಡಳಿ ಮೊದಲೇ ತಿಳಿಸಿತ್ತು. ಇದೀಗ ಅದರಂತೆ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನು ಕೆಲವರು ಸ್ವಾಗತಿಸಿದರೆ, ಕೆಲವರು ಒಂದೊಂದು ಪದ್ಧತಿಯಲ್ಲಿ ಮಧ್ಯ ವಾರ್ಷಿಕ ಮತ್ತು ಅಂತಿಮ ಪರೀಕ್ಷೆ ನಡೆಸಲಿ ಎಂದು ಒತ್ತಾಯಿಸಿದ್ದಾರೆ.