ಕೊರೊನಾ ಲಕ್ಷಣ ಹೊಂದಿರುವವರಿಗೆ ಮಹತ್ವದ ಸೂಚನೆ ನೀಡಿದ ಕೇಂದ್ರ ಸರ್ಕಾರ

Spread the love

ನವದೆಹಲಿ : ಜ್ವರ, ತಲೆನೋವು, ಗಂಟಲು ನೋವು, ಉಸಿರಾಟದ ತೊಂದರೆ, ಮೈ ಕೈ ನೋವು, ರುಚಿ ಅಥವಾ ವಾಸನೆ ಗ್ರಹಿಕೆ ಕಳೆದುಕೊಳ್ಳುವುದು, ಅತಿಯಾದ ಆಯಾಸ ಹಾಗೂ ಅತಿಸಾರದಂತಹ ಲಕ್ಷಣ ಹೊಂದಿರುವವರನ್ನು ಕೋವಿಡ್​ 19 ಶಂಕಿತ ಪ್ರಕರಣವೆಂದು ಗಣನನೆಗೆ ತೆಗೆದುಕೊಳ್ಳುವಂತೆ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್​ ಭೂಷಣ್​ ಹಾಗೂ ಐಸಿಎಂಆರ್​ ಡಿಜಿ ಡಾ. ಬಲರಾಮ ಭಾರ್ಗವ ಎಲ್ಲಾ ರಾಜ್ಯದ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಈ ಪತ್ರವನ್ನು ಬರೆದಿದ್ದಾರೆ.

ವಿವಿಧ ಸ್ಥಳಗಳಲ್ಲಿ ಕ್ಲಾಕ್​ ಫಂಕ್ಷನಲ್​​ RAT ಬೂತ್​​ಗಳನ್ನು ಸಿದ್ಧಪಡಿಸಿ. ವೈದ್ಯಕೀಯ ಹಾಗೂ ಅರೆವೈದ್ಯಕೀಯ ಸಿಬ್ಬಂದಿಯನ್ನು ಬಳಸಿಕೊಳ್ಳಿ. ಹೋಮ್​ ಟೆಸ್ಟ್​ ಕಿಟ್​ಗಳ ಬಳಕೆಗೆ ಜನರನ್ನು ಉತ್ತೇಜಿಸಿ ಎಂದು ಪತ್ರದಲ್ಲಿ ಬರೆಯಲಾಗಿದೆ.

ಕೆಮ್ಮು, ತಲೆನೋವು, ಗಂಟಲು ನೋವು, ಉಸಿರಾಟದ ತೊಂದರೆ, ದೇಹಾಯಾಸ, ರುಚಿ ಅಥವಾ ವಾಸನೆಯ ಗ್ರಹಿಕೆ ಕಳೆದುಕೊಳ್ಳುವುದು, ಅತಿಸಾರ, ಜ್ವರ ಹೀಗೆ ಯಾವುದೇ ಲಕ್ಷಣಗಳಿಂದ ಬಳಲುತ್ತಿರುವ ವ್ಯಕ್ತಿಯನ್ನು ಕೋವಿಡ್​ ಶಂಕಿತನೆಂದು ಪರಿಗಣಿಸಿ ಪ್ರತ್ಯೇಕವಾಗಿ ಇಡಿ ಹಾಗೂ ಇವರು ಕೋವಿಡ್​ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಪತ್ರದಲ್ಲಿ ಹೇಳಲಾಗಿದೆ .