
ಬಾಗಲಕೋಟೆ : ,ಗಾರ್ಮೆಂಟ್ ಕಾರ್ಮಿಕರಿಗೆ,ಹಿರಿಯ ನಾಗರಿಕರಿಗೆ ಉಚಿತ ಬಸ್‍ಪಾಸ್ ನೀಡಲು ಕ್ರಮವಹಿಸಲಾಗುವುದೆಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ತಿಳಿಸಿದರು.
ತಾಲೂಕಿನ ಶಿಗಿಕೇರಿ ಬಾದಾಮಿ ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ನೂತನ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಭೂಮಿ ಪೂಜೆ ನೆರವೇರಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರಿಗೆ ಇಲಾಖೆಯಲ್ಲಿ ಬದಲಾವಣೆ ತರುವ ಮೂಲಕ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ವರ್ಗದ ಮಕ್ಕಳಿಗೆ ಉಚಿತ ಬಸ್‍ಪಾಸ್, ಗಾರ್ಮೆಂಟ್ ಕಾರ್ಮಿಕರಿಗೆ, ಹಿರಿಯ ನಾಗರಿಕರಿಗೆ ಉಚಿತ ಬಸ್‍ಪಾಸ್ ನೀಡಲು ಕ್ರಮವಹಿಸಲಾಗುವುದೆಂದು ತಿಳಿಸಿದರು.