ಮುಂಡಗೋಡ : ಇಲ್ಲಿಯ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ 15-18 ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ವಾಕರಸಾ.ಸಂಸ್ಥೆಯ ಅಧ್ಯಕ್ಷರಾದ ವಿ.ಎಸ್.ಪಾಟೀಲ, ಪ.ಪಂ.ಅಧ್ಯಕ್ಷೆ ರೇಣುಕಾ ಹಾವೇರಿ, ಉಪಾಧ್ಯಕ್ಷ ಮಂಜುನಾಥ ಹರಮಲಕರ, ಸ್ಥಾಯಿ ಸಮಿತಿ ಅಧ್ಯಕ್ಷ ಶೇಖರ ಲಮಾಣಿ, ಪ.ಪಂ.ಸದಸ್ಯ ಶ್ರೀಕಾಂತ ಸಾನು, ಬಿಇಒ ವಿ.ವಿ.ನಡುವಿನಮನಿ, ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್.ಇಂಗಳೆ, ಪ.ಪಂ.ಮುಖ್ಯಾಧಿಕಾರಿ ಮಲ್ಲಯ್ಯ ಹಿರೇಮಠ, ಸರಕಾರಿ ಜ್ಯೂನಿಯರ ಕಾಲೇಜಿನ ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು.
ಉಪನ್ಯಾಸಕ ಗಂಗಾಧರ ನಾಯ್ಕ ಸ್ವಾಗತಿಸಿದರು. ಪ್ರೌಢಶಾಲಾ ಶಿಕ್ಷಕ ರಮೇಶ ಪವಾರ ಕಾರ್ಯಕ್ರಮ ನಿರೂಪಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟಿ ವಂದಿಸಿದರು.